ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ : ಬಿಜೆಪಿ ಶಾಸಕ

ಬೀದರ್ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ವಾಪಸ್ಸು ನೀಡಿದ್ದಾರೆ. ಈ ವಿಚಾರವಾಗಿ ಬೀದರ್ ನಲ್ಲಿ ಬಿಜೆಪಿ ಶಾಸಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಇಡೀ ದೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ. ಹಾಗಾಗಿ ಎಲ್ಲಿ ಅವರು ರಾಜೀನಾಮೆ ಕೊಟ್ಟರೆ ಕಾಂಗ್ರೆಸ್ ಮುಳುಗುತ್ತದೆ ಎಂದು ಭಯದಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ ಎಂದು ಬೀದರ್ ನಲ್ಲಿ ಬಸವಕಲ್ಯಾಣ…

Read More

ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ (Muda Case) ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಇಲಾಖೆಗೆ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ‘ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದ್ರೆ, ಪತಿಯ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ…

Read More

ಮುಡಾ ಕೇಸ್‌: ಸಿಎಂ ಸಹೋದರ ಶಾಕಿಂಗ್‌ ಹೇಳಿಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕೇಸ್‌ ಸದ್ಯ ಸಿಎಂ ಸಿದ್ದರಾಮಯ್ಯ ಅವರಿಗೆ ಸುರುಳಿಯಂತೆ ಸುತ್ತಿಕೊಂಡಿದೆ. ಈ ಬಗ್ಗೆ ಮೊದಲ ಬಾರಿಗೆ ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ ಮಾತನಾಡಿದ್ದಾರೆ. ಈ ಪ್ರಕರಣದಲ್ಲಿ ನನ್ನ ಅಣ್ಣ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ನನ್ನಣ್ಣ ರಾಜಕೀಯದಲ್ಲಿ ಹಲವು ವರ್ಷಗಳನ್ನು ಕಳೆದಿದ್ದಾರೆ. ಇಷ್ಟೂ ವರ್ಷವೂ ಅವರ ಮೇಲೆ ಯಾವುದೇ ಕಳಂಕವಿಲ್ಲ. ಈಗ ಅವರ ಮೇಲೆ ಸುಖಾಸುಮ್ಮನೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಮುಡಾ ಕೇಸ್‌ ಬಗ್ಗೆ ನನಗೆ ಅಷ್ಟೇನೂ ಗೊತ್ತಿಲ್ಲ….

Read More

ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಯಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | 

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ…

Read More

ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಮೈಸೂರು ಪ್ರವಾಸ

ಬೆಂಗಳೂರು, ಸೆಪ್ಟೆಂಬರ್ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಮೈಸೂರು ಲೋಕಾಯುಕ್ತ ವಿಭಾಗದ ಪೊಲೀಸರು ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಈ ನಡೆ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಹೈಕೋರ್ಟ್ ಅರ್ಜಿಯನ್ನು…

Read More

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ಬೆಂಗಳೂರು, ಸೆಪ್ಟೆಂಬರ್ 24: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಪ್ರಾಸಿಕ್ಯೂಷನ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದ್ದು, ಸಿದ್ದರಾಮಯ್ಯಗೆ ಬಿಗ್‌ ಶಾಕ್‌ ಎದುರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ…

Read More

ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ತಮ್ಮ ವಿರುದ್ಧ ಅಭಿಯೋಜನೆಗೆ ಪೂರ್ವಾನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಕಾನೂನು ಸಮರ ಸಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೊದಲ ಹಂತದಲ್ಲಿ ಹೈಕೋರ್ಟ್‌ನಲ್ಲಿ ಹಿನ್ನಡೆ ಉಂಟಾಗಿದೆ. ಅರ್ಜಿದಾರರ (ಸಿದ್ದರಾಮಯ್ಯ) ಕುಟುಂಬಕ್ಕೆ ಸೇರಿದವರೇ (ಪತ್ನಿ) ಫ‌ಲಾನುಭವಿಯಾಗಿರುವ ಹಿನ್ನೆಲೆಯಲ್ಲಿ ತನಿಖೆ ಅಗತ್ಯವಾಗಿದೆ ಎಂದು ಹೈಕೋರ್ಟ್‌ ಸುದೀರ್ಘ‌ 197 ಪುಟಗಳ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿರುವ ಕಾರಣ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್‌ 17ಎ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ…

Read More

ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮ್ಯಯ ಅಂದ್ರೆ ಪರ್ಫೆಕ್ಟ್​. ಲೆಕ್ಕ, ಅಂಕಿ-ಅಂಶದಲ್ಲಿ ಸಿಎಂ ಸಿದ್ದರಾಮಯ್ಯ ಪರ್ಫೆಕ್ಟ್​ ಎಂದು ರಾಜ್ಯ ರಾಜಕಾರಣಲ್ಲಿ ಎಲ್ಲರಿಗೂ ಗೊತ್ತಿರುವ ವಿಷಯ. ಈ ಅಂಕಿ-ಅಂಶದಲ್ಲಿ ಸಿಎಂ ಹಲವು ಬಾರಿ ತಾವು ಪರ್ಫೆಕ್ಟ್​ ಎಂದು ಸಾಬೀತು ಮಾಡಿದ್ದುಂಟು, ಅದಕ್ಕಾಗಿ ಅವರನ್ನು ಲೆಕ್ಕರಾಮಯ್ಯ ಅಂತಲೂ ಕರೆಯುತ್ತಾರೆ.ಇದೀಗ ಮತ್ತೊಮ್ಮೆ ತಮ್ಮ ಅಂಕಿ-ಅಂಶ ಪರ್ಫೆಕ್ಟ್​ ಎಂದು ಸಾಬೀತುಪಡಿಸಿದ್ದಾರೆ. ಕೊಪ್ಪಳ, (ಸೆಪ್ಟೆಂಬರ್ 22): ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಇಂದು ತುಂಗಭದ್ರಾ ಜಲಾಶಯ ಗೇಟ್ ದುರಸ್ತಿ ಮಾಡಿದವರಿಗೆ ಸರ್ಕಾರದಿಂದ ಸತ್ಕಾರ ಮಾಡಲಾಯಿತು. ಮುನಿರಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ…

Read More

ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗೆ 11770 ಕೋಟಿ ರೂ ಯೋಜನೆಗಳಿಗೆ ಅನುಮೋದನೆ: ಸಿಎಂ ಸಿದ್ಧರಾಮಯ್ಯ

ಕಲಬುರಗಿ : ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ…

Read More

ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಇಂದು ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದರು. 76 ನೇ ಕರ್ನಾಟಕ ಕಲ್ಯಾಣ ಉತ್ಸವ ದಿನಾಚರಣೆ 2024 ರ ಪ್ರಯುಕ್ತ ಸಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ್, ಹೆಚ್.ಕೆ ಪಾಟೀಲ್, ಡಿ ಸುಧಾಕರ್ ಮತ್ತಿತರರಿದ್ದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ…

Read More

ಗ್ಯಾರಂಟಿ’ ಮೂಲಕ ರಾಜ್ಯದ 1.20 ಲಕ್ಷ ಕುಟುಂಬಗಳಿಗೆ ಪ್ರತಿ ವರ್ಷ 60 ಸಾವಿರ ರೂ.ವರೆಗೆ ಆರ್ಥಿಕ ಸಹಾಯ : CM ಸಿದ್ದರಾಮಯ್ಯ

ರಾಮನಗರ : ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Read More