SIT ಗೆ ರಾಜಕಾರಣಿಗಳ ಸೆಕ್ಸ್ ವಿಡಿಯೋ ಕೊಟ್ಟ ಸಂತ್ರಸ್ತೆ
ಬೆಂಗಳೂರು, ಅಕ್ಟೋಬರ್ 03: ಬೆಂಗಳೂರಿನ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಬೆದರಿಕೆ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ಆರೋಪದ ಮೇಲೆ ದೂರು ದಾಖಲಾಗಿವೆ. ಶಾಸಕರು ಮಹಿಳೆಯನ್ನು ಹನಿಟ್ರ್ಯಾಪ್‌ಗೆ ಬಳಸಿದ್ದಾರೆಂಬ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕರ ಮೇಲೆ ದೂರು ನೀಡಿದ್ದ ದೂರುದಾರೆ ಸಂತ್ರಸ್ತೆಯೇ ಇದೀಗ ತನಿಖಾಧಿಕಾರಿಗಳ ಮುಂದೆ ಕೆಲವು ರಾಜಕಾರಣಿಗಳ ಬಂಡವಾಳ ಬಿಚ್ಚಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೌದು, ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಶಾಸಕ ಮುನಿರತ್ನ ವಿರುದ್ಧ ಕಗ್ಗಲಿಪುರ…