ರತನ್ ಟಾಟಾ ಇನ್ನಿಲ್ಲ
ಮುಂಬೈ: ದೇಶದ ಕೈಗಾರಿಕಾಉದ್ಯಮಕ್ಕೆ ಅಭಿವೃದ್ಧಿಯ ದಿಕ್ಸೂಚಿಯನ್ನು ನೀಡಿದ್ದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ ಇಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮ ಆರೋಗ್ಯ ಸ್ಥಿತಿ ಕುರಿತಂತೆ ಎರಡು ದಿನದ ಹಿಂದಷ್ಟೇ ವದಂತಿ ಹಬ್ಬಿದಾಗ ‘ನಾನು ಆರೋಗ್ಯವಾಗಿದ್ದೇನೆ’ ಎಂದು ಸ್ವತಃ ಸ್ಪಷ್ಟನೆ ನೀಡಿದ್ದರು. ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಇಲ್ಲಿನ…