ತಿರುಪತಿ ಲಡ್ಡುವಿವಾದ; SIT ತನಿಖೆ ದಿಢೀರ್ ಸ್ಥಗಿತ
ಹೈದ್ರಾಬಾದ್: ತಿರುಪತಿ ಲಡ್ಡು ಕಲಬೆರಕೆ ಪ್ರಕರಣದ ಕುರಿತು ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ. ಅಕ್ಟೋಬರ್ 3 ರಂದು ಸುಪ್ರೀಂ ಕೋರ್ಟ್‌ನಲ್ಲಿ ಮುಂದಿನ ವಿಚಾರಣೆ ನಡೆಯಲಿದ್ದು, ಅಲ್ಲಿವರೆಗೆ ತನಿಖೆಯನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ. ಮುಂದಿನ ಆದೇಶದವರೆಗೆ ತನಿಖೆ ಅಮಾನತು ತಿರುಪತಿ ಲಡ್ಡು ಪ್ರಕರಣದ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದ್ವಾರಕಾ ತಿರುಮಲ ರಾವ್ ತಿಳಿಸಿದರು. ತನಿಖೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಅಮಾನತುಗೊಳಿಸಿರುವುದು ಮುನ್ನೆಚ್ಚರಿಕೆ ಕ್ರಮವಾಗಿದೆ….