ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಪಕ್ಷದಿಂದ ಆಚೆ ಹಾಕಿ!
ಬೆಂಗಳೂರು, ಸೆಪ್ಟೆಂಬರ್ 30: ನೈತಿಕತೆ ಬಗ್ಗೆ ಮಾತನಾಡುವ ನಿಮಗೆ ನೈತಿಕತೆ ಇದ್ದರೆ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಪಕ್ಷದಿಂದ ಆಚೆ ಹಾಕಿ. ನಿಮಗೆ ಆ ದಮ್ಮು ತಾಕತ್ತು ಇದೆಯಾ? ನಿರ್ಮಲಾ ಸೀತಾರಾಮನ್, ಅಶೋಕ್, ಮುನಿರತ್ನ ಅವರನ್ನು ವಜಾಗೊಳಿಸಿ. ಆಮೇಲೆ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಡಿ.ಕೆ.ಶಿವಕುಮಾರ್ ರಾಜೀನಾಮೆ ಕೇಳಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಮ್ಮ ರಾಜ್ಯದಲ್ಲಿ ಬಿಜೆಪಿಯವರು ಸಂಪೂರ್ಣವಾದ ಬಿಕ್ಕಟ್ಟಿನಲ್ಲಿದ್ದಾರೆ. ಆ ಪಕ್ಷದ ಒಳಜಗಳ, ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ. ಕಳೆದ ಒಂದೂವರೆ ವರ್ಷಗಳಿಂದ ನಮ್ಮ…