ಕಸ್ತೂರಿ ರಂಗನ್ ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ
ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಗೊಳಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಸಭೆಯಲ್ಲಿ ಆಕ್ರೋಶ ಭರಿತರಾಗಿ ಮಾತನಾಡಿದರು ಎಂದು ತಿಳಿದು ಬಂದಿದೆ. ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು, ಜಾರಿಯಾದರೆ ಪಶ್ಚಿಮಘಟ್ಟದ ಜನಜೀವನ ಅಸ್ತವ್ಯಸ್ತವಾಗುತ್ತದೆ. ಜನಪ್ರತಿನಿಧಿಗಳಿಗೆ ಮತದಾರರನ್ನು ಎದುರಿಸುವುದಕ್ಕೆ ಕಷ್ಟವಾಗುತ್ತದೆ. ಒಂದೊಮ್ಮೆ ವರದಿ ಜಾರಿ ಮಾಡುವುದಕ್ಕೆ ಸರಕಾರ ನಿರ್ಧರಿಸಿದರೆ ತಾನು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ವರದಿ ಸಂಬಂಧ ಕರೆದಿದ್ದ ಜನಪ್ರತಿನಿಧಿಗಳ ಸಭೆಯಲ್ಲಿ ಎಚ್ಚರಿಕೆ…